Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:21 - ಕನ್ನಡ ಸಮಕಾಲಿಕ ಅನುವಾದ

21 ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:21
15 ತಿಳಿವುಗಳ ಹೋಲಿಕೆ  

ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,


ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.


ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.


ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:


“ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.


ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು