Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:24 - ಕನ್ನಡ ಸಮಕಾಲಿಕ ಅನುವಾದ

24 “ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:24
21 ತಿಳಿವುಗಳ ಹೋಲಿಕೆ  

ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.


“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ


ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,


ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.


‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.


ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.


ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


“ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ?


ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.


ಆಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು