Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:25 - ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ, ಬೊಂಬೆಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:25
29 ತಿಳಿವುಗಳ ಹೋಲಿಕೆ  

ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.


“ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ.


“ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.


ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.


ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


“ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.


ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.


ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.


ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’


ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.


ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು