Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:26 - ಕನ್ನಡ ಸಮಕಾಲಿಕ ಅನುವಾದ

26 ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಬ್ಬನು ಭಯಂಕರವಾದ ಕೃತ್ಯಗಳನ್ನು ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದ್ದರಿಂದ ನೀವು ಈ ದೇಶವನ್ನು ಹೊಂದಲಾರಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:26
26 ತಿಳಿವುಗಳ ಹೋಲಿಕೆ  

ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


“ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


“ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


“ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.


ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.


ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.


ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು, ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬುದು ಗುಪ್ತವಾಗಿದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ, ಅವಳನ್ನು ಹಿಡಿಯದೇ ಇದ್ದರೆ,


“ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು