Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:27 - ಕನ್ನಡ ಸಮಕಾಲಿಕ ಅನುವಾದ

27 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವದು; ಬೈಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:27
16 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.


ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು