ಯೆಹೆಜ್ಕೇಲನು 33:30 - ಕನ್ನಡ ಸಮಕಾಲಿಕ ಅನುವಾದ30 “ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ” ಅಧ್ಯಾಯವನ್ನು ನೋಡಿ |
ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.