ಯೆಹೆಜ್ಕೇಲನು 33:8 - ಕನ್ನಡ ಸಮಕಾಲಿಕ ಅನುವಾದ8 ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಬದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |