ಯೆಹೆಜ್ಕೇಲನು 34:10 - ಕನ್ನಡ ಸಮಕಾಲಿಕ ಅನುವಾದ10 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.” ಅಧ್ಯಾಯವನ್ನು ನೋಡಿ |