Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:11 - ಕನ್ನಡ ಸಮಕಾಲಿಕ ಅನುವಾದ

11 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಅವರಿಗೆ ಕುರುಬನಾಗಿರುವೆನು. ತಪ್ಪಿಹೋದ ಕುರಿಗಳನ್ನು ನಾನು ಹುಡುಕುವೆನು, ನಾನು ಅವರನ್ನು ಗಮನಿಸುತ್ತಾ ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:11
24 ತಿಳಿವುಗಳ ಹೋಲಿಕೆ  

ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.


ತಪ್ಪಿಹೋದ ಕುರಿಯಂತೆ ನಾನು ದಾರಿತಪ್ಪಿದ್ದೇನೆ. ನಿಮ್ಮ ಸೇವಕನಾದ ನನ್ನನ್ನು ಬಂದು ಹುಡುಕಿರಿ, ಏಕೆಂದರೆ ನಿಮ್ಮ ಆಜ್ಞೆಗಳನ್ನು ನಾನು ಮರೆಯುವುದಿಲ್ಲ.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ನಾನೇ, ನಾನಾಗಿಯೇ ಮಾತನಾಡಿದ್ದೇನೆ. ನಾನೇ ಅವನನ್ನು ಕರೆದದ್ದು; ಅವನನ್ನು ನಾನೇ ಬರಮಾಡಿದ್ದೇನೆ. ಅವನ ಮಾರ್ಗವು ಯಶಸ್ವಿಯಾಗುವುದು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.


“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು