ಯೆಹೆಜ್ಕೇಲನು 34:13 - ಕನ್ನಡ ಸಮಕಾಲಿಕ ಅನುವಾದ13 ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ಕುರಿಗಳನ್ನು ಆ ದೇಶಗಳಿಂದ ಬರಮಾಡುವೆನು. ಆ ದೇಶಗಳಿಂದ ಅವುಗಳನ್ನು ಒಟ್ಟುಗೂಡಿಸುವೆನು. ಅವುಗಳ ಸ್ವಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಬೆಟ್ಟಗಳಲ್ಲಿ ಅವುಗಳನ್ನು ಮೇಯಿಸುವೆನು. ನೀರಿನ ತೊರೆಗಳ ಬದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನು ಅವುಗಳನ್ನು ಮೇಯಿಸುವೆನು. ಅಧ್ಯಾಯವನ್ನು ನೋಡಿ |