Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:2
35 ತಿಳಿವುಗಳ ಹೋಲಿಕೆ  

“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.


“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.


ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.


ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು