ಯೆಹೆಜ್ಕೇಲನು 34:23 - ಕನ್ನಡ ಸಮಕಾಲಿಕ ಅನುವಾದ23 ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು. ಅಧ್ಯಾಯವನ್ನು ನೋಡಿ |