ಯೆಹೆಜ್ಕೇಲನು 35:5 - ಕನ್ನಡ ಸಮಕಾಲಿಕ ಅನುವಾದ5 “ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಇಸ್ರಾಯೇಲ್ಯರ ಮೇಲೆ ದೀರ್ಘದ್ವೇಷವಿಟ್ಟು ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’” ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.