ಯೆಹೆಜ್ಕೇಲನು 35:9 - ಕನ್ನಡ ಸಮಕಾಲಿಕ ಅನುವಾದ9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನಿನ್ನವರಿಗೆ ನಿಶ್ಚಿತವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿದುಕೊಳ್ಳುತ್ತಿ.” ಅಧ್ಯಾಯವನ್ನು ನೋಡಿ |
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”