ಯೆಹೆಜ್ಕೇಲನು 36:1 - ಕನ್ನಡ ಸಮಕಾಲಿಕ ಅನುವಾದ1 “ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನರಪುತ್ರನೇ, ನನ್ನ ಪರವಾಗಿ ಇಸ್ರೇಲಿನ ಪರ್ವತದೊಂದಿಗೆ ಮಾತನಾಡು. ಅವುಗಳಿಗೆ ಯೆಹೋವನ ಮಾತುಗಳನ್ನು ಕೇಳಲು ಹೇಳು. ಅಧ್ಯಾಯವನ್ನು ನೋಡಿ |
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.