ಯೆಹೆಜ್ಕೇಲನು 36:15 - ಕನ್ನಡ ಸಮಕಾಲಿಕ ಅನುವಾದ15 ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |