Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ನಾಡಿನ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಹೊಲೆಗೈದಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:18
21 ತಿಳಿವುಗಳ ಹೋಲಿಕೆ  

ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.


ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’


ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ.


ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ”


ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು