Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:3
33 ತಿಳಿವುಗಳ ಹೋಲಿಕೆ  

ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ಅಪಕೀರ್ತಿ ಹೊಂದಿ ಸಮಾಧಾನವಾಗುತ್ತೇವೆ. ನಾವು ಈಗಿನ ವರೆಗೂ ಭೂಮಿಯ ಕಸವೋ ವಿಶ್ವದ ಹೊಲಸೋ ಎಂಬಂತೆ ಆಗಿದ್ದೇವೆ.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


“ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.


ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.


ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.


“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.


ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.


ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.


ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.


ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.


ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು