Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:31 - ಕನ್ನಡ ಸಮಕಾಲಿಕ ಅನುವಾದ

31 ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿವಿುತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವು ಮಾಡಿದ ದುಷ್ಟತನವನ್ನು ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೆಯದಲ್ಲ ಎಂಬುದನ್ನು ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕೃತ್ಯಗಳಿಗಾಗಿ ನಿಮ್ಮನ್ನೆ ನೀವು ಅಸಹ್ಯಪಟ್ಟುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:31
17 ತಿಳಿವುಗಳ ಹೋಲಿಕೆ  

ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.


ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು