ಯೆಹೆಜ್ಕೇಲನು 36:32 - ಕನ್ನಡ ಸಮಕಾಲಿಕ ಅನುವಾದ32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.” ಅಧ್ಯಾಯವನ್ನು ನೋಡಿ |