Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:37 - ಕನ್ನಡ ಸಮಕಾಲಿಕ ಅನುವಾದ

37 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:37
23 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.


ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’


ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”


ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.


ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.


“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು