ಯೆಹೆಜ್ಕೇಲನು 36:38 - ಕನ್ನಡ ಸಮಕಾಲಿಕ ಅನುವಾದ38 ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿ |
“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.