Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರೇ, ನೋಡಿರಿ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ ಇಸ್ರಾಯೇಲ್ ದೇಶಕ್ಕೆ ಸೇರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸ್ವದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:12
21 ತಿಳಿವುಗಳ ಹೋಲಿಕೆ  

ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ,


ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು