Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:16 - ಕನ್ನಡ ಸಮಕಾಲಿಕ ಅನುವಾದ

16 “ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:16
10 ತಿಳಿವುಗಳ ಹೋಲಿಕೆ  

ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.


ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.


ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು