Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:22 - ಕನ್ನಡ ಸಮಕಾಲಿಕ ಅನುವಾದ

22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ ಭಿನ್ನರಾಜ್ಯದವರಾಗಿಯೂ ಇರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:22
32 ತಿಳಿವುಗಳ ಹೋಲಿಕೆ  

“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


ಆ ಎರಡನ್ನು ಒಂದೇ ಕೋಲಾಗುವ ಹಾಗೆ ಜೋಡಿಸು. ಅವು ಒಂದಾಗಿ ನಿನ್ನ ಕೈಯಲ್ಲಿರುವುವು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು