Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:24 - ಕನ್ನಡ ಸಮಕಾಲಿಕ ಅನುವಾದ

24 “ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:24
38 ತಿಳಿವುಗಳ ಹೋಲಿಕೆ  

ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.


ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’


“ ‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು