Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:27 - ಕನ್ನಡ ಸಮಕಾಲಿಕ ಅನುವಾದ

27 ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:27
12 ತಿಳಿವುಗಳ ಹೋಲಿಕೆ  

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.


ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.


ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು