ಯೆಹೆಜ್ಕೇಲನು 37:28 - ಕನ್ನಡ ಸಮಕಾಲಿಕ ಅನುವಾದ28 ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಾಯೇಲನ್ನು ಮೀಸಲು ಮಾಡಿಕೊಂಡಾತನು ಯೆಹೋವನಾದ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.’” ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.