Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:6 - ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮ್ಮಲ್ಲಿ ಸ್ನಾಯುಗಳನ್ನೂ ನರಗಳನ್ನೂ ಬರಮಾಡುವೆನು. ಆಮೇಲೆ ನಿಮ್ಮನ್ನು ಚರ್ಮದಿಂದ ಹೊದಿಸುವೆನು. ಆಮೇಲೆ ನಿಮ್ಮಲ್ಲಿ ಶ್ವಾಸವನ್ನಿಟ್ಟು ನಿಮಗೆ ಜೀವ ಬರುವಂತೆ ಮಾಡುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:6
27 ತಿಳಿವುಗಳ ಹೋಲಿಕೆ  

ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”


ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.


ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.”


ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’


ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.


ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.


ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು