Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:7 - ಕನ್ನಡ ಸಮಕಾಲಿಕ ಅನುವಾದ

7 ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನಗೆ ಅಪ್ಪಣೆಯಾದಂತೆ ನಾನು ಆ ದೈವೋಕ್ತಿಯನ್ನೆತ್ತಿ ನುಡಿಯುತ್ತಿರಲು ಸದ್ದಾಯಿತು, ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ ಜೋಡನೆಯಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಎಲುಬುಗಳೊಂದಿಗೆ ಯೆಹೋವನ ಪರವಾಗಿ ಮಾತನಾಡಿದೆನು. ನಾನು ಮಾತನಾಡುತ್ತಾ ಇರುವಾಗಲೇ ಒಂದು ದೊಡ್ಡ ಶಬ್ದವನ್ನು ಕೇಳಿದೆನು. ಎಲುಬುಗಳು ಅಲ್ಲಾಡತೊಡಗಿದವು ಮತ್ತು ಒಂದಕ್ಕೊಂದು ಜೋಡಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:7
10 ತಿಳಿವುಗಳ ಹೋಲಿಕೆ  

ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.


ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು