ಯೆಹೆಜ್ಕೇಲನು 37:8 - ಕನ್ನಡ ಸಮಕಾಲಿಕ ಅನುವಾದ8 ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ನೋಡಲಾಗಿ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಕಣ್ಣೆದುರಿನಲ್ಲೇ ಅವುಗಳಿಗೆ ಸ್ನಾಯುಗಳು, ನರಗಳು ಬಂದವು; ಮತ್ತು ಚರ್ವವು ಅವುಗಳನ್ನು ಮುಚ್ಚಿತು. ಆದರೆ ಆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶ್ವಾಸವಿರಲಿಲ್ಲ. ಅಧ್ಯಾಯವನ್ನು ನೋಡಿ |