Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:11 - ಕನ್ನಡ ಸಮಕಾಲಿಕ ಅನುವಾದ

11 ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:11
16 ತಿಳಿವುಗಳ ಹೋಲಿಕೆ  

“ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.


ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ


ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು