ಯೆಹೆಜ್ಕೇಲನು 38:12 - ಕನ್ನಡ ಸಮಕಾಲಿಕ ಅನುವಾದ12 ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸೂರೆಗೆಯ್ದು ಕೊಳ್ಳೆಹೊಡೆಯಬೇಕೆಂತಲೂ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಒಟ್ಟುಗೂಡಿ ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಅವರನ್ನು ಸೋಲಿಸಿ ಅವರ ಬಳಿಯಲ್ಲಿರುವ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸ್ವತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಬಲಾಢ್ಯ ದೇಶಗಳು ಬೇರೆ ಬಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಬೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ. ಅಧ್ಯಾಯವನ್ನು ನೋಡಿ |