ಯೆಹೆಜ್ಕೇಲನು 38:13 - ಕನ್ನಡ ಸಮಕಾಲಿಕ ಅನುವಾದ13 ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಶೆಬ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲು ಬಂದಿರುವಿಯಾ? ಬೆಳ್ಳಿಬಂಗಾರಗಳನ್ನೂ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ಕೊಳ್ಳೆಹೊಡೆಯಲು ನಿನ್ನ ಸೈನ್ಯಸಮೇತವಾಗಿ ಬಂದಿರುವೆಯಾ?’” ಎಂದು ವಿಚಾರಿಸುವರು. ಅಧ್ಯಾಯವನ್ನು ನೋಡಿ |