Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:2 - ಕನ್ನಡ ಸಮಕಾಲಿಕ ಅನುವಾದ

2 “ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ರೋಷಿನವರನ್ನೂ ಮೆಷೆಕಿನವರನ್ನೂ ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:2
18 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.


“ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.


ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,


ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”


“ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು.


ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.


“ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.


“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.


“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು