Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:22 - ಕನ್ನಡ ಸಮಕಾಲಿಕ ಅನುವಾದ

22 ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡಿ ಅವನ ಮೇಲೂ ಅವನ ಗುವ್ಮಿುಗಳ ಮೇಲೂ ಅವನೊಂದಿಗಿರುವ ಬಹುಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:22
23 ತಿಳಿವುಗಳ ಹೋಲಿಕೆ  

ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.


ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.


ಅವರಲ್ಲಿ ಹತರಾದವರು, ಬೀದಿಪಾಲಾಗುವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತ ಪ್ರವಾಹದಿಂದ ಪರ್ವತಗಳು ತೋಯಿಸುವುದು.


ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.


ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.


ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು