Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:9 - ಕನ್ನಡ ಸಮಕಾಲಿಕ ಅನುವಾದ

9 ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಬಹುಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:9
12 ತಿಳಿವುಗಳ ಹೋಲಿಕೆ  

ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.


ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಅವರ ರಥಗಳ ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು