ಯೆಹೆಜ್ಕೇಲನು 39:15 - ಕನ್ನಡ ಸಮಕಾಲಿಕ ಅನುವಾದ15 ಪ್ರಯಾಣಿಕರು ಆ ದೇಶದಲ್ಲಿ ಹಾದುಹೋಗುತ್ತಿರುವಾಗ ಯಾವುದಾದರೊಂದು ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ಹಾಕುವರು, ಹೂಣಿಡುವವರು ಅದನ್ನು ಹಾಮೋನ್ ಗೋಗಿನ ಕಣಿವೆಯಲ್ಲಿ ಹೂಳಿಡುವ ತನಕ ಆ ಗುರುತು ಹಾಗೆಯೇ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದಾರಿಗಳಲ್ಲಿ ಯಾವನೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ನಿಲ್ಲಿಸುವನು; ಹೂಣಿಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಹೂಣುವ ತನಕ ಆ ಗುರುತು ಹಾಗೇ ನಿಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದಾರಿಗಳಲ್ಲಿ ಯಾವನೇ ಆಗಲಿ ಪ್ರಯಾಣಮಾಡುತ್ತಿರುವಾಗ ಮನುಷ್ಯರ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ನಿಲ್ಲಿಸುವನು; ಹೂಣಿಡುವವರು ಗೋಗನ ಸಮೂಹದ ತಗ್ಗಿನಲ್ಲಿ ಅದನ್ನು ಹೂಣುವ ತನಕ ಆ ಗುರುತು ಹಾಗೇ ನಿಂತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರಲ್ಲೊಬ್ಬನಿಗೆ ಒಂದು ಎಲುಬು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನ್ನಿಡುವನು. ಹೂಣಿಡುವವರು ಬಂದು ಆ ಎಲುಬನ್ನು ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು. ಅಧ್ಯಾಯವನ್ನು ನೋಡಿ |