Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:17 - ಕನ್ನಡ ಸಮಕಾಲಿಕ ಅನುವಾದ

17 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ - ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:17
18 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು.


ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.


ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಹೆಣ ಇದ್ದಲ್ಲಿಗೆ, ಹದ್ದುಗಳು ಬಂದು ಸೇರುತ್ತವೆ.


ಕಾಡುಕೋಣಗಳೂ ಹೋರಿಗೂಳಿಗಳೂ ಈ ಯಜ್ಞಪಶುಗಳೊಂದಿಗೆ ಬೀಳುವುವು; ನಾಡು ರಕ್ತದಿಂದ ತೊಯ್ದಿರುವುದು; ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.


ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು