Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:2 - ಕನ್ನಡ ಸಮಕಾಲಿಕ ಅನುವಾದ

2 ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರ ದಿಕ್ಕಿನ ಕಟ್ಟಕಡೆಯಿಂದ ಬರಮಾಡಿ ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಗೋ, ನಾನು ನಿನಗೆ ವಿರುದ್ಧನಾಗಿ, ನಿನ್ನನ್ನು ತಿರುಗಿಸಿ ಮುನ್ನಡೆಸಿ, ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನ್ನನ್ನು ಸೆರೆಹಿಡಿದು ಅತ್ಯಂತ ಉತ್ತರ ದಿಕ್ಕಿನಿಂದ ನಿನ್ನನ್ನು ಬರಮಾಡಿ ಇಸ್ರೇಲಿನ ಪರ್ವತಗಳ ವಿರುದ್ಧವಾಗಿ ಯುದ್ಧ ಮಾಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:2
8 ತಿಳಿವುಗಳ ಹೋಲಿಕೆ  

ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ.


ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.


ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.


“ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.


“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು