ಯೆಹೆಜ್ಕೇಲನು 39:20 - ಕನ್ನಡ ಸಮಕಾಲಿಕ ಅನುವಾದ20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನ ಈ ಔತಣದಲ್ಲಿ ಕುದುರೆಗಳ, ರಾಹುತರ, ಶೂರರ ಮತ್ತು ಸೈನಿಕರ ಮಾಂಸವನ್ನು ಬೇಕಾದಷ್ಟು ತಿನ್ನುವಿರಿ.’” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿ |
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.