ಯೆಹೆಜ್ಕೇಲನು 39:4 - ಕನ್ನಡ ಸಮಕಾಲಿಕ ಅನುವಾದ4 ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು. ಅಧ್ಯಾಯವನ್ನು ನೋಡಿ |