Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:8 - ಕನ್ನಡ ಸಮಕಾಲಿಕ ಅನುವಾದ

8 ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ ಬಂತು, ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದು ಸಂಭವಿಸುವ ಸಮಯವು ಹತ್ತಿರ ಬಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:8
10 ತಿಳಿವುಗಳ ಹೋಲಿಕೆ  

“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ?


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.


ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.


“ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.


“ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


“ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು