Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:1 - ಕನ್ನಡ ಸಮಕಾಲಿಕ ಅನುವಾದ

1 “ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನರಪುತ್ರನೇ, ನೀನು ಒಂದು ಚದರ ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ, ಜೆರುಸಲೇಮಿನ ನಕ್ಷೆಯನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನರಪುತ್ರನೇ, ನೀನು ಒಂದು ಚದರ ಬಿಲ್ಲೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ ಯೆರೂಸಲೇವಿುನ ನಕ್ಷೆಯನ್ನು ಬರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊ, ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:1
17 ತಿಳಿವುಗಳ ಹೋಲಿಕೆ  

“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.


ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.


ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


“ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು