Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:10 - ಕನ್ನಡ ಸಮಕಾಲಿಕ ಅನುವಾದ

10 ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಆಹಾರದ ತೂಕ ದಿನವೊಂದಕ್ಕೆ 230 ಗ್ರಾಂ ಇರಲಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲೆಯಂತೆ ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ದಿನವೊಂದಕ್ಕೆ ಎಂಟು ರೊಟ್ಟಿಗಳನ್ನು ತಿನ್ನುವೆ. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:10
9 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.


ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.


“ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು