Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:14 - ಕನ್ನಡ ಸಮಕಾಲಿಕ ಅನುವಾದ

14 ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:14
17 ತಿಳಿವುಗಳ ಹೋಲಿಕೆ  

ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.


ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.


ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು,


ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು.


“ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.


“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.


ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.


ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.


ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.


ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು.


ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.


ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು