Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:6 - ಕನ್ನಡ ಸಮಕಾಲಿಕ ಅನುವಾದ

6 “ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಗಡೆಯಲ್ಲಿ ಮಲಗಿ, ಯೆಹೂದ ಜನರ ಅಕ್ರಮವನ್ನು ನಲವತ್ತು ದಿವಸ ಹೊರಬೇಕು. ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಷ್ಟು ದಿವಸಗಳನ್ನು ತೀರಿಸಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು; ವರುಷ ಒಂದಕ್ಕೆ ಒಂದು ದಿನದ ಮೇರೆಗೆ ನಾಲ್ವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅನಂತರ ನೀನು ನಿನ್ನ ಬಲಗಡೆಯಲ್ಲಿ ನಲವತ್ತು ದಿವಸಗಳ ಕಾಲ ಮಲಗಬೇಕು. ಈ ಸಾರಿ ನೀನು ಯೆಹೂದದ ದೋಷಗಳನ್ನು ನಲವತ್ತು ದಿವಸ ಹೊತ್ತುಕೊಳ್ಳುವೆ. ಒಂದು ದಿವಸವು ಒಂದು ವರ್ಷಕ್ಕೆ ಸಮಾನ. ಯೆಹೂದವು ಎಷ್ಟು ಕಾಲ ಶಿಕ್ಷೆಯನ್ನು ಅನುಭವಿಸಬೇಕೆಂದು ಇದು ತೋರಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:6
7 ತಿಳಿವುಗಳ ಹೋಲಿಕೆ  

ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.


ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು