Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:14 - ಕನ್ನಡ ಸಮಕಾಲಿಕ ಅನುವಾದ

14 ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಾಕಾರದಲ್ಲಿನ ನಿಲವು ಕಂಬದವರೆಗೆ ನಿಲವುಕಂಬಗಳನ್ನು ಅಳತೆಮಾಡಲು ಮೂವತ್ತು ಮೀಟರ್ ಇದ್ದವು. ಹೆಬ್ಬಾಗಿಲನ್ನು ಸುತ್ತುಮುತ್ತಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪ್ರಾಕಾರದಲ್ಲಿನ ನಿಲವುಕಂಬದವರೆಗೆ ನಿಲವುಕಂಬಗಳನ್ನು [ಅಳತೆ] ಮಾಡಲು ಅರುವತ್ತು ಮೊಳವಿದ್ದವು; ಹೆಬ್ಬಾಗಿಲನ್ನು ಸುತ್ತುಮುತ್ತಲು [ಅಳೆದನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಕೈಸಾಲೆಯ ಎರಡು ಬದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:14
11 ತಿಳಿವುಗಳ ಹೋಲಿಕೆ  

“ಗುಡಾರದ ಅಂಗಳವನ್ನು ಮಾಡಬೇಕು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಬೇಕು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು.


ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು.


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.”


ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.


ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.


ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು,


ಆಗ ಅವನು, ಒಂದು ಕೋಣೆಯ ಉಪವಿಭಾಗದ ಮಾಳಿಗೆಯಿಂದ ಇನ್ನೊಂದು ಕೋಣೆಯ ಉಪವಿಭಾಗದ ಮಾಳಿಗೆಯವರೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಸುಮಾರು ಹದಿಮೂರು ಮೀಟರಿತ್ತು.


ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು.


ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು