Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:16 - ಕನ್ನಡ ಸಮಕಾಲಿಕ ಅನುವಾದ

16 ಕೋಣೆಯ ಉಪವಿಭಾಗಗಳು ಮತ್ತು ಬಾಗಿಲ ಚೌಕಟ್ಟಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು. ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು. ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗೋಡೇಕೋಣೆಗಳಲ್ಲಿಯೂ ಒಳಗಣ ಎರಡು ಕಡೆಯ ನಿಲವು ಕಂಬಗಳಲ್ಲಿಯೂ ಕೈಸಾಲೆಯಲ್ಲಿಯೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತುಮುತ್ತಲಿದ್ದವು; [ಹೊರಗಣ] ನಿಲವುಕಂಬಗಳಲ್ಲಿ ಖರ್ಜೂರವೃಕ್ಷಗಳು ಚಿತ್ರಿತವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:16
29 ತಿಳಿವುಗಳ ಹೋಲಿಕೆ  

ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು.


ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.


ಅವನು ಸಣ್ಣ ಜಾಲರಿಗಳುಳ್ಳ ಕಿಟಿಕಿಗಳನ್ನು ಆಲಯಕ್ಕೆ ಮಾಡಿಸಿದನು.


ಅದರ ಮೇಲೆ ಕೆರೂಬಿಗಳ, ಖರ್ಜೂರ ಗಿಡಗಳ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಈ ಕೆತ್ತನೆಗಳ ಮೇಲೆ ಸಮವಾಗಿ ಬಂಗಾರದ ತಗಡನ್ನು ಹೊದಿಸಿದನು.


ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು.


ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು.


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.


ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡಸಾಲೆಗಳ ಮೇಲೆ ಪಡಸಾಲೆಗಳಿದ್ದವು.


ಅದು ಕೆರೂಬಿಗಳು ಮತ್ತು ಖರ್ಜೂರದ ಮರಗಳ ಚಿತ್ರಗಳಿಂದ ಕೂಡಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಮತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖಗಳು ಇದ್ದವು.


ಸುತ್ತಲಿರುವ ಕೈಸಾಲೆಗಳೂ ಸುಮಾರು ಇಪ್ಪತ್ತೈದು ಮೀಟರ್ ಉದ್ದವಾಗಿಯೂ ಸುಮಾರು ಹದಿಮೂರು ಮೀಟರ್ ಅಗಲವಾಗಿಯೂ ಇದ್ದವು.


ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.


ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು.


ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು.


ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು.


ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.


ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗಿದ್ದವು. ಅದರ ಕಂಬಗಳಲ್ಲಿ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅದಕ್ಕೆ ಏರುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.


ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.


ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.


ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.


ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.


ಅನಂತರ ಅವನು ಒಳಗೆ ಹೋಗಿ ಪರಿಶುದ್ಧಸ್ಥಳದ ಪ್ರವೇಶದ್ವಾರದ ಕಂಬಗಳನ್ನು ಅಳೆದನು; ಒಂದೊಂದು ಕಂಬವು ಸುಮಾರು ಒಂದು ಮೀಟರ್ ಅಗಲವಿತ್ತು. ಪ್ರವೇಶದ್ವಾರವು ಸುಮಾರು ಮೂರು ಮೀಟರ್ ಅಗಲವಾಗಿತ್ತು ಮತ್ತು ಅದರ ಎರಡೂ ಬದಿಯ ಗೋಡೆಯು ಸುಮಾರು ನಾಲ್ಕು ಮೀಟರ್ ಅಗಲವಾಗಿತ್ತು.


ಆಲಯದ ಬಾಗಿಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಚಿತ್ರಿತವಾಗುವ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಾಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.


ಮೂರು ಸಾಲು ಕಿಟಕಿಗಳು ಇದ್ದವು. ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು