Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:24 - ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಅವನು ನನ್ನನ್ನು ತೆಂಕಲಿಗೆ ಕರತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದ್ವಾರವಿರುವದನ್ನು ಕಂಡೆನು. ಅವನು ಒಳಗಿನ ಗೋಡೆಗಳನ್ನೂ ಕೈಸಾಲೆಯನ್ನೂ ಅಳತೆಮಾಡಿದನು. ಅದರ ಅಳತೆ ಬೇರೆ ಪ್ರವೇಶ ದ್ವಾರಗಳಂತೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:24
6 ತಿಳಿವುಗಳ ಹೋಲಿಕೆ  

“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.


ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.


ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು